ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ದೇವರಾಜ ಅರಸು ಅವರ ಪ್ರತಿಮೆ ಅನಾವರಣ ಸಮಾರಂಭ

ಮೈಸೂರು: ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ. ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತುವಂತೆ ಮಾಡಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಸು ಅವರು ತಳ ಸಮುದಾಯಗಳಿಗೆ ಅವಕಾಶಗಳನ್ನು ಸೃಷ್ಟಿಸಿದರು. ಆ ಅವಕಾಶಗಳಿಂದ ಬಹಳ ಮಂದಿ ಸಮಾಜದ ಮುಖ್ಯವಾಹಿನಿಗೆ ಬಂದರು. ಸುದೀರ್ಘ ಅವಧಿಯ ಕಾಲ ಮುಖ್ಯಮಂತ್ರಿಗಳಾಗಿ ಸಮಾನ ಅವಕಾಶಗಳನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸಿದ್ದರು ಎಂದರು.

ಬಹುಸಂಖ್ಯಾತ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿದ್ದರಿಂದ ಅಸಮಾನತೆ ಸೃಷ್ಟಿಯಾಗಿದೆ. ನಮ್ಮ ಸರ್ಕಾರ ಅಸಮಾನತೆ ನಿವಾರಿಸಿ ಸಮಾನ ಅವಕಾಶಗಳನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಜನಪರ, ಸಾಮಾಜಿಕ ನ್ಯಾಯದ ಪರ ಯೋಜನೆಗಳನ್ನು ರೂಪಿಸಿ ಜಾರಿಗೆ ತರುತ್ತಿದೆ. ಶಿಕ್ಷಣ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಎಲ್ಲರಲ್ಲೂ ಪ್ರತಿಭೆ ಇದೆ. ಅಂಬೇಡ್ಕರ್ ಮತ್ತು ವಾಲ್ಮೀಕಿ, ವ್ಯಾಸರು ಇದಕ್ಕೆ ಉದಾಹರಣೆ. ನಮ್ಮ ರಾಜ್ಯಕ್ಕೆ “ಕರ್ನಾಟಕ” ಎಂದು ನಾಮಕರಣ ಆಗಿದ್ದು ಅರಸು ಅವರ ಕಾಲದಲ್ಲಿ. ಇದರ ಸುವರ್ಣ ಸಂಭ್ರಮ ಮಾಡಿದ್ದು ನಮ್ಮ ಸರ್ಕಾರ ಎನ್ನುವುದು ಹೆಮ್ಮೆಯ ವಿಷಯ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ