ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತಿಗೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಗಂಭೀರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಆರ್.ಎಸ್.ಎಸ್ ಮುಖ್ಯಸ್ಥರಾದ ಮೋಹನ್ ಭಾಗವತ್ ಅವರು ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ

ಹರಪನಹಳ್ಳಿ: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳು ರಜೆಯ ಮೇಲೆ ತೆರಳಿದ್ದರು. ನಾಳೆ ಗೃಹ ಸಚಿವರು ಈ ಬಗ್ಗೆ ಸಭೆ ಕರೆದಿದ್ದಾರೆ. ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನೂ ಮುಂದೆ ಇಂಥದ್ದು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಹರಪನಹಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್.ಎಸ್.ಎಸ್. ನ್ನು ಸೀಮಿತಗೊಳಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆಯುವುದನ್ನು ಕಡ್ಡಾಯ ಮಾಡಿಲ್ಲ. ಯಾವುದೇ ಸಂಘ ಸಂಸ್ಥೆಗಳು ಆಯಾ ಜಿಲ್ಲಾಧಿಕಾರಿಗಳ ಬಳಿ ಅನುಮತಿ ಪಡೆಯಬೇಕು ಎಂದು ಆದೇಶದಲ್ಲಿ ಹೇಳಿದೆ. ಅವರು ಹಾಗೆ ಭಾವಿಸಿಕೊಂಡಿದ್ದಾರೆ ಅಷ್ಟೆ. ಆರ್.ಎಸ್.ಎಸ್ ಮುಖ್ಯಸ್ಥರಾದ ಮೋಹನ್ ಭಾಗವತ್ ಅವರು ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ ಎಂದರು.

ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಪ್ರಕರಣ ನ್ಯಾಯಾಲಯದಲ್ಲಿದ್ದು, ಎಂದು ಮಾಡಬೇಕೆಂದು ನ್ಯಾಯಾಲಯವು ಸೂಚಿಸುತ್ತದೋ ಆಗ ಚುನಾವಣೆ ನಡೆಸಲಾಗುವುದು. ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲಿಯೇ ಕಬ್ಬಿನ ಬೆಲೆ ಬಗ್ಗೆ ತೀರ್ಮಾನ ಮಾಡಲಾಗಿದೆ. 50 ರೂ.ಗಳನ್ನು ಎಲ್ಲರೂ ಕೊಡಲೇಬೇಕು. ಕೊಡದಿರುವವರೂ ಕೊಡುತ್ತಾರೆ ಎಂದು ಭಾವಿಸಿದ್ದೇನೆ. ಆದೇಶ ಪಾಲಿಸದ ಸಕ್ಕರೆ ಕಾರ್ಖಾನೆ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಅತಿವೃಷ್ಟಿಯಿಂದ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾಗಿದ್ದು ರೈತರಿಗೆ ಪರಿಹಾರ ನೀಡಲಾಗುವುದು ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ