ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

ಬೆಂಗಳೂರು: ಗ್ರಾಮೀಣ ಭಾರತದ ಪ್ರಗತಿಗಾಗಿ ನೆಹರೂ ಅವರು ಸಹಕಾರ ಕ್ಷೇತ್ರಕ್ಕೆ ಚೈತನ್ಯ ನೀಡಿದರು. ಹೀಗಾಗಿ ಸಹಕಾರಿ ಚಳವಳಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಮೂಲವಾಗಿದೆ. ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಸಹಕಾರಿ ರಂಗದ ಸಾಧಕರಿಗೆ ‘ಸಹಕಾರ ರತ್ನ’ ಪ್ರಶಸ್ತಿಯನ್ನು ವಿತರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಷ್ಯಾದಲ್ಲೇ ಮೊದಲ ಬಾರಿಗೆ ಸಹಕಾರಿ ಬ್ಯಾಂಕ್ ಸ್ಥಾಪನೆಯಾಗಿದ್ದು ರಾಜ್ಯದಲ್ಲಿ. ಹೀಗಾಗಿ ಕರ್ನಾಟಕವನ್ನು ಭಾರತದ ಸಹಕಾರ ಕ್ಷೇತ್ರದ ರಾಜಧಾನಿ ಎಂದು ಕರೆಯುತ್ತಾರೆ ಎಂದರು.

ಯಾವುದೇ ಗ್ರಾಮ ಉದ್ಧಾರ ಆಗಬೇಕಾದರೆ ಆ ಗ್ರಾಮದಲ್ಲಿ ಒಂದು ಶಾಲೆ, ಒಂದು ಸಹಕಾರಿ ಸಂಘ, ಒಂದು ಆಸ್ಪತ್ರೆ ಇರಬೇಕು ಎನ್ನುವುದು ನೆಹರೂ ಅವರ ಸ್ಪಷ್ಟ ಕಲ್ಪನೆಯಾಗಿತ್ತು. ಈ ಕಲ್ಪನೆಯನ್ನು ಗುರಿಯಾಗಿಸಿಕೊಂಡು ಕೆಲಸ ಮಾಡಿ ಸಹಕಾರ ಚಳವಳಿಗೆ ನೆಹರೂ ಮತ್ತು ಮಹಾತ್ಮ ಗಾಂಧಿ ಅವರು ಶಕ್ತಿ ನೀಡಿದರು ಎಂದರು.

ರಾಜ್ಯದಲ್ಲಿ ವಾರ್ಷಿಕ ವಹಿವಾಟು ₹25,000 ಕೋಟಿ ಜೊತೆಗೆ ಪ್ರತೀ ದಿನ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದ್ದು, ಇದು ಸಹಕಾರಿ ಚಳವಳಿ ಮೂಲಕ ಬೆಳೆದ ಹಾಲು ಮಹಾಮಂಡಳಗಳ ಮಹತ್ ಸಾಧನೆ. ಹಾಲು ಉತ್ಪಾದಕರ ಸಂಘಗಳು ಚಳವಳಿ ಸ್ವರೂಪದಲ್ಲಿ ನಡೆದು ಮಧ್ಯವರ್ತಿಗಳ ಹಾವಳಿ ಇಲ್ಲದೆ ರೈತರು ಹಾಲನ್ನು ನೇರವಾಗಿ ಉತ್ಪಾದಕರ ಸಂಘಗಳಿಗೆ ಸರಬರಾಜು ಮಾಡುವಂತಾಯಿತು ಎಂದರು.

ಸಹಕಾರ ಕ್ಷೇತ್ರದಿಂದಾಗಿ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ದೊಡ್ಡ ಚೈತನ್ಯ ಸಿಕ್ಕಿದೆ. ಲಕ್ಷಾಂತರ ಕುಟುಂಬಗಳ ಬದುಕಿಗೆ ಆಧಾರವಾಗಿದೆ. ನಾನು ಮೊದಲಿಗೆ ಮುಖ್ಯಮಂತ್ರಿಯಾಗಿ ಹಾಲಿನ ಪ್ರೋತ್ಸಾಹ ಧನವನ್ನು ಲೀಟರಿಗೆ 3 ರೂ. ಮಾಡಿದ್ದೆ. ಈಗ ಪ್ರೋತ್ಸಾಹ ಧನವನ್ನು ಲೀಟರಿಗೆ 5 ರೂ.ಗೆ ಹೆಚ್ಚಿಸಿ ಪ್ರತೀ ದಿನ ಸರ್ಕಾರದಿಂದ 5 ಕೋಟಿ ರೂಪಾಯಿ ಸಹಾಯಧನವನ್ನು ಹಾಲು ಉತ್ಪಾದಕರಿಗೆ ನೀಡಲಾಗುತ್ತಿದೆ. 40 ಲಕ್ಷ ರೈತರಿಗೆ ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಸಹಾಯ ಧನ ಜಮೆ ಆಗುತ್ತಿದೆ. ಇದಕ್ಕೆಲ್ಲಾ ಹಾಲು ಮಹಾ ಮಂಡಳ ತಾಯಿಬೇರು ಇದ್ದಹಾಗೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ