ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಶೀಘ್ರದಲ್ಲೇ ಹೊಸ 7 ಜಿಟಿಟಿಸಿ ಕೇಂದ್ರಗಳ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ನೂತನ ಜಿಟಿಟಿಸಿ ಕೇಂದ್ರಗಳ ಸ್ಥಾಪನೆ ಕುರಿತು ಸಭೆ

ಬೆಂಗಳೂರು: ನೂತನ ಜಿಟಿಟಿಸಿ ಕೇಂದ್ರಗಳ ಸ್ಥಾಪನೆ ಕುರಿತು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಮುಖ್ಯಾಂಶಗಳು;

ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡುವ ಜಿಟಿಟಿಸಿ ಮೂಲಕ ಗ್ರಾಮೀಣ ಅಭ್ಯರ್ಥಿಗಳಿಗೆ ಹೆಚ್ಚಿನ ಉದ್ಯೋಗ ಕಲ್ಪಿಸಲು ಸಾಧ್ಯವಾಗಿದೆ.

ರಾಜ್ಯದಲ್ಲಿ ಒಟ್ಟು 32ಜಿಟಿಟಿಸಿ ಕೇಂದ್ರಗಳಿವೆ. ಈ ಸಾಲಿನ ಬಜೆಟ್ ನಲ್ಲಿ ಹೊಸ 7 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿದ್ದು, ಈ ಕೇಂದ್ರಗಳ ಕಾಮಗಾರಿ ಆದಷ್ಟು ಬೇಗನೆ ಪ್ರಾರಂಭಿಸಲಾಗುವುದು.

ಇಂಡಿ, ಮಧುಗಿರಿ, ಕಂಪ್ಲಿ, ರಾಯಚೂರು ಗ್ರಾಮೀಣ, ಸಿಂಧನೂರಿನಲ್ಲಿ ಜಿಟಿಟಿಸಿ ಪ್ರಾರಂಭಿಸಲು ಸ್ಥಳ ಗುರುತಿಸಲಾಗಿದ್ದು, ಕಾಮಗಾರಿ ಪ್ರಾರಂಭಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುವುದು. ಸಂಡೂರು ಮತ್ತು ಹೊಸದುರ್ಗ ತಾಲೂಕುಗಳಲ್ಲಿ ಪ್ರಕ್ರಿಯೆ ಆದಷ್ಟು ಬೇಗನೆ ಪ್ರಾರಂಭಿಸಲು ಕ್ರಮ ವಹಿಸಲಾಗುವುದು.

ಜಿಟಿಟಿಸಿ ಪ್ರವೇಶಾತಿಯನ್ನು 6 ಸಾವಿರಕ್ಕೆ ಹೆಚ್ಚಿಸಲಾಗಿದೆ. ಇಲ್ಲಿಂದ ತರಬೇತಿ ಪಡೆದು ಹೊರಬರುವ ವಿದ್ಯಾರ್ಥಿಗಳಿಗೆ ವಿದೇಶಿ ಕಂಪನಿಗಳಲ್ಲಿಯೂ ಸೇರಿದಂತೆ ಶೇಕಡ 100 ರಷ್ಟು ನೇಮಕಾತಿ ಆಗುತ್ತಿದೆ ಎನ್ನುವುದು ಧನಾತ್ಮಕ ಅಂಶ.

ಯಾವ ಕೋರ್ಸ್ ಗಳಿಗೆ ಬೇಡಿಕೆ ಇದೆ ಅಂತಹ ಕೋರ್ಸ್ ಗಳನ್ನು ಪ್ರಾರಂಭಿಸಲು ಕ್ರಮ ವಹಿಸಲಾಗುವುದು. ಕೈಗಾರಿಕೆಗಳ ಬೇಡಿಕೆಗಳಿಗೆ ಅನುಗುಣವಾಗಿ ಕೌಶಲ್ಯ ತರಬೇತಿ ನೀಡಲಾಗುವುದು.

ಜಿಟಿಟಿಸಿ ಉತ್ಪಾದನಾ ಕೇಂದ್ರದಲ್ಲಿ ಇಸ್ರೋದ ಚಂದ್ರಯಾನ ನೌಕೆ ಲೂನಾರ್ ರೋವರ್ ಚಕ್ರದ ಉತ್ಪಾದನೆ ಸೇರಿದಂತೆ ಹಲವು ವೈಮಾನಿಕ ಉಪಕರಣಗಳ ಉತ್ಪಾದನೆ ಮಾಡಲಾಗುತ್ತಿದೆ.

ಜಪಾನ್, ಜರ್ಮನಿ, ಆಸ್ಟ್ರೇಲಿಯಾ ಸೇರಿದಂತೆ ಹಲವು ರಾಷ್ಟ್ರಗಳೊಂದಿಗೆ ಜಿಟಿಟಿಸಿ ಒಡಂಬಡಿಕೆ ಮಾಡಿಕೊಳ್ಳಲಾಗುವುದು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ