ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೃತಕ ಬುದ್ಧಿಮತ್ತೆ ಕಲಿತು ಹಣೆಬರಹ ಅಂದರೆ ಅದು ವಿದ್ಯೆಯೇ ಅಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಫೇಸ್ ಮತ್ತು ಎಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ, ಫೇಸ್ ಟ್ರೈಡ್ ಪಾರ್ಕ್ ಮತ್ತು ಫೇಸ್ ಸ್ಪೋರ್ಟ್ಸ್ ಅರೇನಾದ ಶಿಲಾನ್ಯಾಸ ಹಾಗೂ ಪೇಸ್ ಕೇರ್ಸ್ ಸಮುದಾಯ ಸೇವೆ ಯೋಜನೆಗಳ ಉದ್ಘಾಟನಾ ಸಮಾರಂಭ

ಬೆಂಗಳೂರು: ಪೇಸ್ ಗ್ರೂಪ್‌ನ ಸಂಸ್ಥಾಪಕರಾದ ಡಾ.ಪಿ.ಎ.ಇಬ್ರಾಹಿಂ ಅವರ ದೂರದೃಷ್ಟಿಯ ಫಲವಾಗಿ ಭಾರತ ಹಾಗೂ ವಿದೇಶಗಳಲ್ಲಿ ಅನೇಕ ಶೈಕ್ಷಣಿಕ ಸಂಸ್ಥೆಗಳು ಸ್ಥಾಪಿತವಾಗಿದ್ದು, ಸುಮಾರು 36,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ದೊಡ್ಡಪ್ರಮಾಣದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ಪೇಸ್ ಸಂಸ್ಥೆ, ಉತ್ತಮ ಗುಣಮಟ್ಟದ ವಿದ್ಯಾಸಂಸ್ಥೆಯಾಗಿದೆ. ಉತ್ತಮ ಕಲಿಕಾ ವಾತಾವರಣವನ್ನು ನೀಡುವ ಶಿಕ್ಷಣ ಸಂಸ್ಥೆಯಾಗಿರುವುದು ಶ್ಲಾಘನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಫೇಸ್ ಮತ್ತು ಎಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ, ಫೇಸ್ ಟ್ರೈಡ್ ಪಾರ್ಕ್ ಮತ್ತು ಫೇಸ್ ಸ್ಪೋರ್ಟ್ಸ್ ಅರೇನಾದ ಶಿಲಾನ್ಯಾಸ ಹಾಗೂ ಪೇಸ್ ಕೇರ್ಸ್ ಸಮುದಾಯ ಸೇವೆ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯೆ ಪಡೆದ ನಂತರ ಸಮಾಜಕ್ಕೆ ನೀಡುವ ಕೊಡುಗೆ ಬಗ್ಗೆ ವಿದ್ಯಾರ್ಥಿಗಳು ಗಮನಹರಿಸಬೇಕು. ಆಧುನಿಕ ಶಿಕ್ಷಣದ ಜೊತೆಗೆ ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನೂ ವಿದ್ಯಾರ್ಥಿಗಳು ಹೊಂದಿರಬೇಕು. ಆಗ ಮಾತ್ರ ಸಮಾಜದ ಸಮಸ್ಯೆಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಲು ಸಾಧ್ಯ. ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಲೀ, ಅಂಧಶ್ರದ್ಧೆಯ ಪಾಲನೆಯಾಗಲಿ ಮಾಡಬಾರದು ಎಂದರು.

ಕೃತಕ ಬುದ್ಧಿಮತ್ತೆ ಕಲಿತು ಹಣೆಬರಹ ಅಂದರೆ ಅದು ವಿದ್ಯೆಯೇ ಅಲ್ಲ. ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವಂತ ವಿದ್ಯೆ ಅಗತ್ಯವಿದೆ. ವೈಚಾರಿಕತೆ, ವೈಜ್ಞಾನಿಕತೆ ಇರುವ ಹಾಗೂ ಜಾತಿ ವ್ಯವಸ್ಥೆಗೆ ಪರಿಹಾರ ರೂಪದಲ್ಲಿರುವ ವಿದ್ಯೆ ಬೇಕಿದೆ. ಸ್ವಾತಂತ್ರ್ಯಬಂದು 79 ವರ್ಷ ಹಾಗೂ ಸಂವಿಧಾನ ಜಾರಿಗೆ ಬಂದು 75 ವರ್ಷಗಳಾದರೂ ವೈಚಾರಿಕತೆ ಮತ್ತು ವೈಜ್ಞಾನಿಕತೆ ಬರದೇ ಹೋದರೆ ಪ್ರಯೋಜನ ಏನು? ಎಂದು ಪ್ರಶ್ನಿಸಿದರು.

ಪೇಸ್ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ. ಇಬ್ರಾಹಿಂ ಅವರ ಕನಸನ್ನು ನನಸು ಮಾಡುವ ಕೆಲಸ ಸಂಸ್ಥೆಯಿಂದ ಆಗಲಿ ಎಂದು ಶುಭ ಹಾರೈಸುತ್ತೇನೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ