ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಚಳ್ಳಕೆರೆ ನಗರಕ್ಕೆ ₹198 ಕೋಟಿ ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆಗೆ ಸಂಪುಟ ಸಭೆಯಲ್ಲಿ ನಿರ್ಧಾರ

ಡಿ.04: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಕಲಬುರಗಿ, ಗದಗ, ದಾವಣಗೆರೆ, ಮಂಗಳೂರು, ಬೆಂಗಳೂರು ಕೆಂಗೇರಿ ಸಮೀಪದ ಭೀಮನಕುಪ್ಪೆ ಮತ್ತು ಮೈಸೂರಿನಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳನ್ನು ₹452.89 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿ ತೀವ್ರ ನಿಗಾ ಘಟಕವನ್ನು ₹28.69 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 19 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ₹304 ಕೋಟಿ ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಹೆಬ್ಬಾಳದ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ ಆವರಣದಲ್ಲಿ ಕುರಿ ಮತ್ತು ಮೇಕೆಗಳ ನೀಲಿ ನಾಲಗೆ ರೋಗ ಹಾಗೂ ಇನ್ನಿತರೆ ರೋಗಗಳಿಗೆ ಲಸಿಕೆ ತಯಾರಿಸಲು ಅತ್ಯಾಧುನಿಕ ಲಸಿಕಾ ತಯಾರಿಕಾ ಪ್ರಯೋಗಾಲಯವನ್ನು ₹27 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಯಡ್ವೋಣಿಯಲ್ಲಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ₹30 ಕೋಟಿ ವೆಚ್ಚದಲ್ಲಿ ಶಾಲಾ ಸಂಕೀರ್ಣ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ರಾಜ್ಯದಾದ್ಯಂತ 334 ಆಯುಷ್ಮಾನ್‌ ಆರೋಗ್ಯ ಮಂದಿರಗಳನ್ನು ₹217 ಕೋಟಿ ವೆಚ್ಚದಲ್ಲಿ ನಿರ್ಮಿಸಲು ತೀರ್ಮಾನಿಸಲಾಯಿತು.

ರಾಜ್ಯದ 22 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ₹22 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

25 ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ ಕಾಮಗಾರಿಯನ್ನು ₹80 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹಾಗೂ ಗಂಡಸಿಯ ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ₹73.22 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಭಕ್ತರ ಹಳ್ಳಿ ಮತ್ತು ಕುಣಿಗಲ್‌ ತಾಲೂಕಿನ ಇತರೆ 21 ಟ್ಯಾಂಕ್‌ಗಳನ್ನು ತುಂಬಿಸುವ ₹34 ಕೋಟಿ ವೆಚ್ಚದ ಯೋಜನೆಗೆ ಆಡಳಿತಾತ್ಮಕ ಅನುಮೋದನೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಹೇಮಾವತಿ ನದಿಯಿಂದ ನೀರನ್ನು ಎತ್ತಿ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ಮತ್ತು ನಾಗಮಂಗಲ ತಾಲೂಕು ಹಾಗೂ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕುಗಳ ವಿವಿಧ ಕೆರೆಗಳನ್ನು ತುಂಬಿಸುವ ₹67 ಕೋಟಿ ವೆಚ್ಚದ ಯೋಜನೆಗೆ ಆಡಳಿತಾತ್ಮಕ ಅನುಮೋದನೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಚಡಚಣ ಮತ್ತು ಸುತ್ತಮುತ್ತಲಿನ ಗ್ರಾಮಗಳ 9,200 ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಹಾಗೂ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ರೂಪಿಸಲಾದ ಚಡಚಣ ಏತನೀರಾವರಿ ಯೋಜನೆಯ ₹485 ಕೋಟಿ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಚಳ್ಳಕೆರೆ ನಗರಕ್ಕೆ ₹198 ಕೋಟಿ ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಮುಂದಿನ ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಲು ಅನುಮೋದನೆಗೊಂಡ ವಿಧೇಯಕಗಳಿವು

ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ – 2025

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ – 2025

ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ – 2025

ಶ್ರೀ ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ – 2025

ಕರ್ನಾಟಕ ಒಳನಾಡು ನೌಕೆ ನಿಯಮಗಳು – 2025

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ (ತಿದ್ದುಪಡಿ) ವಿಧೇಯಕ – 2025

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ವಿಧೇಯಕ – 2025 ಮಂಡಿಸಲಾಯಿತು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ