ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಭೋವಿ ಸಮಾಜದ ನಿಯೋಗ; ಹೆಚ್ಚಿನ ಅನುದಾನಕ್ಕೆ ಮನವಿ

ಲೋಕಸಭಾ ಚುನಾವಣೆಯಲ್ಲಿ ಸಮುದಾಯಕ್ಕೆ ಪ್ರಾತಿನಿಧ್ಯ, ವಿಧಾನಪರಿಷತ್ ಸದಸ್ಯ ಸ್ಥಾನ ದೊರಕಬೇಕು ಎಂದು ಭೋವಿ ಸಮಾಜದ ನಾಯಕರು ಬೇಡಿಕೆ ಇಟ್ಟರು.


ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ ಅವರ ನೇತೃತ್ವದಲ್ಲಿ ಭೋವಿ ಜನಾಂಗದ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.

ಸಮಾಜದ ಮುಖಂಡರು ಮಾತನಾಡಿ ಸಾಮಾಜಿಕ ಶ್ರೇಯೋಭಿವೃದ್ಧಿಗೆ ಭೋವಿ ಅಭಿವೃದ್ಧಿ ನಿಗಮ ಸ್ಥಾಪನೆ ಯಾಗಿದ್ದು, ಹೆಚ್ಚಿನ ಅನುದಾನ ಒದಗಿಸುವಂತೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯಲ್ಲಿ ಸಮುದಾಯಕ್ಕೆ ಪ್ರಾತಿನಿಧ್ಯ, ವಿಧಾನಪರಿಷತ್ ಸದಸ್ಯ ಸ್ಥಾನ ದೊರಕಬೇಕು ಎಂದು ಬೇಡಿಕೆ ಇಟ್ಟರು.

ಭೋವಿ ಸಮಾಜದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಕುರಿತು ಪಕ್ಷದ ವರಿಷ್ಠರೊಂದಿಗೆ ಗಂಭೀರವಾಗಿ ಚರ್ಚೆ ಮಾಡಲಾಗುವುದು, ವಸ್ತು ಸ್ಥಿತಿ ವಿವರಿಸಲಾಗುವುದು ಎಂದು ಭರವಸೆ ನೀಡಿದರು.

ಭೋವಿ ಸಮಾಜದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಸಮಾಜ ಕಲ್ಯಾಣ ಸಚಿವ ಡಾ: ಹೆಚ್ .ಸಿ ಮಹದೇವಪ್ಪ, ಮಾಜಿ ಸಚಿವ ವೆಂಕಟರಮಣನಪ್ಪ, ಶಾಸಕ ವೆಂಕಟೇಶ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸಮಾಜದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ