ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರಿ ಶಾಲೆಗಳಲ್ಲಿ ಸಮುದಾಯ ಮತ್ತು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನೀತಿಗೆ ಸಂಪುಟ ಸಭೆ ಅನುಮೋದನೆ 

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

 ಬಿಡಿಎ ನಿರ್ಮಿಸಲಿರುವ ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ (ಬಿಬಿಸಿ) ಯೋಜನೆಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ, 2025ರ ಅಕ್ಟೋಬರ್‌ 17ರಂದು ಹೊರಡಿಸಿದ್ದ ಆದೇಶದಂತೆ ಭೂ ಮಾಲೀಕರಿಗೆ ಪರಿಹಾರ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ. 

 ಬೆಂಗಳೂರು ಉಪನಗರ ಸಾರಿಗೆ ಯೋಜನೆಯ (ಬಿಎಸ್‌ಟಿಪಿ) ಕಾರಿಡಾರ್‌ 2 ಮತ್ತು 4ರ ಪರಿಷ್ಕೃತ ಅಂದಾಜು ಮೊತ್ತ ₹16,876 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

 ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕ – 2025ಕ್ಕೆ ಅನುಮೋದನೆ

ಬೆಳಗಾವಿ ಜಿಲ್ಲೆಯ ಗೋಕಾಕ್‌ ತಾಲೂಕಿನಲ್ಲಿ 100 ಹಾಸಿಗೆಗಳ ಹೊಸ ತಾಲೂಕು ಆಸ್ಪತ್ರೆಯನ್ನು ₹40 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ತಾತ್ವಿಕ ಅನುಮೋದನೆಗೆ ಸಂಪುಟ ಸಭೆ ಸಮ್ಮತಿಸಿದೆ.

ರಾಜ್ಯದ ಆಯ್ದ (2023-24) ಆರು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳ ರಚನಾತ್ಮಕ ವಿನ್ಯಾಸವನ್ನು ಉನ್ನತೀಕರಿಸಿ ಉತ್ಕೃಷ್ಟ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳನ್ನಾಗಿ ಪರಿವರ್ತಿಸುವ ₹36.90 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ

 2025-26ನೇ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಅಗತ್ಯವಿರುವ 41,685 ಪೀಠೋಪಕರಣಗಳನ್ನು ಕೆಎಸ್ಎಫ್‌ಐಸಿಯಿಂದ ನೇರ ಖರೀದಿಯ ಮೂಲಕ ಅಂದಾಜು ₹8.64 ಕೋಟಿ ವೆಚ್ಚದಲ್ಲಿ ಮತ್ತು ಅಲ್ಪಾವಧಿಯ ಟೆಂಡರ್ ಮೂಲಕ ಅಂದಾಜು ₹26.67 ಕೋಟಿ ವೆಚ್ಚದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆಗೆ ಸಚಿವ ಸಂಪುಟ ಸಭೆ ಸಮ್ಮತಿಸಿದೆ.

ಹೈದರಾಬಾದ್‌ನ ಐಐಟಿ ಸಹಯೋಗದೊಂದಿಗೆ ಹೊಸ ಕರ್ನಾಟಕ ಜಿಎಸ್‌ಟಿ ಅನಲೈಟಿಕ್ಸ್ ಪೋರ್ಟಲ್ ಅನ್ನು ₹19 ಕೋಟಿಗಳ ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಹಾಗೂ ಕಾರ್ಯಗತಗೊಳಿಸಲು ಅನುಮೋದನೆ 

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರಿ ಶಾಲೆಗಳಲ್ಲಿ ಸಮುದಾಯ ಮತ್ತು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನೀತಿಗೆ (CCSR Policy) ಅನುಮೋದನೆ ನೀಡಿದೆ. 

ಬೆಂಗಳೂರಿನ ಯಲಹಂಕ ಮಾದಪ್ಪನಹಳ್ಳಿ ಕಾಯ್ದಿಟ್ಟ ಬಳಿಯ 153 ಎಕರೆ ಅರಣ್ಯ ಪ್ರದೇಶದಲ್ಲಿ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನ ವನ್ನು ₹50.29 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆಗೆ ಸಂಪುಟ ಸಭೆ ಸಮ್ಮತಿಸಿದೆ.

2025-26ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) RoP ಯಡಿ ವಿವಿಧ ಐಇಸಿ/ ಎಸ್‌ಬಿಸಿಸಿ ಕಾರ್ಯಚಟುವಟಿಕೆಗಳ ₹41.80 ಕೋಟಿಗಳ ಸಮಗ್ರ ಕ್ರಿಯಾ ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆಗೆ ಸಂಪುಟ ಸಭೆ ಸಮ್ಮತಿಸಿದೆ.

100 ಪಶುವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡಗಳನ್ನು ₹50 ಕೋಟಿಗಳ ಅಂದಾಜು ವೆಚ್ಚದಲ್ಲಿ ನಬಾರ್ಡ್ ಅನುದಾನದೊಂದಿಗೆ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ.

ಅಂಗಾಂಗ ಕಸಿಗೆ ಒಂದು ಸಾವಿರ ಹಾಸಿಗೆ ಸಾಮರ್ಥ್ಯದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಿ, ನಿರ್ವಹಣೆ ಮಾಡುವ ಸಂಬಂಧ ಅಜೀಂ ಪ್ರೇಮ್‌ ಜಿ ಫೌಂಡೇಶನ್‌ಗೆ ಬೆಂಗಳೂರಿನ ರಾಜೀವ್‌ ಗಾಂಧಿ ಎದೆ ರೋಗಗಳ ಆಸ್ಪತ್ರೆ ಆವರಣದಲ್ಲಿ 10 ಎಕರೆ ಭೂಮಿ ನೀಡಲು ಅನುಮೋದನೆಗೆ ಸಂಪುಟ ಸಭೆ ಸಮ್ಮತಿಸಿದೆ.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ