ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ರೋಗ ತಡೆಗಟ್ಟುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಅಭಯ ಹಸ್ತದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಇಂದು 1,000 ಜನರು ನೇಮಕಾತಿ ಆದೇಶಗಳನ್ನು ಪಡೆದು ಆರೋಗ್ಯ ಇಲಾಖೆಗೆ ಸೇರ್ಪಡೆಯಾಗಿರುವುದು ಸಂತೋಷದ ವಿಷಯ. ಇದು ಕೇವಲ ವೃತ್ತಿಯಲ್ಲ, ಜೀವ ಉಳಿಸುವ ಹಾಗೂ ರೋಗ ತಡೆಯುವ ಸಾರ್ಥಕ ಕಾರ್ಯವಾಗಿದೆ ಎಂದರು.

ನಮ್ಮ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದ ನಂತರ ನೇಮಕಾತಿಯಲ್ಲಿದ್ದ ಹಲವು ಸಮಸ್ಯೆಗಳನ್ನು ಬಗೆಹರಿಸಿ, ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುತ್ತಿದೆ. ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಶಿಕ್ಷಣ, ಆರೋಗ್ಯ, ಪೊಲೀಸ್ ವ್ಯವಸ್ಥೆ ಅತಿ ಮಹತ್ವದ್ದಾಗಿದ್ದು, ಇಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಆದ್ಯತೆ ನೀಡುತ್ತಿದೆ. 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿದ್ದು, ಇವುಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು .

ಈ ಎಲ್ಲ ನೇಮಕಾತಿಗಳನ್ನು ಕೌನ್ಸೆಲಿಂಗ್ ಮೂಲಕ ಮಾಡುತ್ತಿದ್ದು, ಭ್ರಷ್ಠಚಾರ ತಡೆಯಲು ಸಾಧ್ಯವಾಗುತ್ತಿದೆ. 5,700 ವೈದ್ಯರು ಸೇರಿದಂತೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಭ್ರಷ್ಟಾಚಾರವನ್ನು ತಡೆಯುವುದು ಸರ್ಕಾರದ ಆಶಯ. ವರ್ಗಾವಣೆ ಏಜೆಂಟ್ ಗಳ ಹಾವಳಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ನೌಕರರು ಇದಕ್ಕೆ ಬಲಿಯಾಗಬಾರದು ಎಂದರು. 

ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ ಇಲಾಖೆಯ ಕೆಲಸ ಕಾರ್ಯಗಳಲ್ಲಿ ಜಾತಿ, ಧರ್ಮಗಳ ಬೇಧಗಳನ್ನು ಮೀರಿ, ಮಾನವೀಯತೆಯಿಂದ ಸೇವೆ ಸಲ್ಲಿಸುವುದು ಮುಖ್ಯ. ರೋಗಿಗಳು ಚಿಕಿತ್ಸೆಯ ಸಂದರ್ಭದಲ್ಲಿ ಬೇಕಾಗುವ ರಕ್ತವನ್ನು ಪಡೆಯಲು ಯಾವುದೇ ಜಾತಿ-ಧರ್ಮಗಳನ್ನು ಪರಿಗಣಿಸುವುದಿಲ್ಲ. ಆದರೆ ಜನರು ಗುಣಮುಖರಾದ ತಕ್ಷಣ ಮತ್ತೆ ಜಾತಿ-ಧರ್ಮಗಳ ಸುಳಿಯಲ್ಲಿ ಬೀಳುತ್ತಾರೆ. ರೋಗ ತಡೆಗಟ್ಟುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಈ ದಿಸೆಯಲ್ಲಿ ಆರೋಗ್ಯ ಸಿಬ್ಬಂದಿಗಳು ಕಾರ್ಯತತ್ಪರರಾಗಬೇಕು. ರಾಜ್ಯದ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಸರ್ಕಾರ ಕಾರ್ಯಗತಗೊಳಿಸುತ್ತಿದೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ