ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ನಮ್ಮ ಸರ್ಕಾರವನ್ನು ಪ್ರಶ್ನಿಸಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧ ಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. 

ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು 2 ಕೋಟಿ ಉದ್ಯೋಗ ನೀಡುವುದಾಗಿ ತಿಳಿಸಿದರೇ ಹೊರತು, ಯಾರಿಗೂ ಉದ್ಯೋಗ ದೊರೆಯಲಿಲ್ಲ. ರಾಜ್ಯದಲ್ಲಿ ಬಿಜೆಪಿಯವರು ಆಡಳಿತ ನಡೆಸಿದ ಸಂದರ್ಭದಲ್ಲಿ ಯಾವುದೇ ಉದ್ಯೋಗಗಳನ್ನು ನೀಡಲಿಲ್ಲ. ಆದ್ದರಿಂದ ನಮ್ಮ ಸರ್ಕಾರವನ್ನು ಪ್ರಶ್ನಿಸಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ ಎಂದರು. 

ಸರ್ಕಾರಿ ನೇಮಕಾತಿಗಳಲ್ಲಿ ಒಳಮೀಸಲಾತಿಯ ಸಮಸ್ಯೆಯಿಂದ ವಿಳಂಬವಾಗಿತ್ತಾದರೂ, ಸದ್ಯದಲ್ಲಿಯೇ ನೇಮಕಾತಿಯನ್ನು ಪ್ರಾರಂಭಿಸಿ, ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ನಮ್ಮ ಸರ್ಕಾರ ನುಡಿದಂತೆ ನಡೆದು ಸರ್ಕಾರಿ ನೇಮಕಾತಿಗಳನ್ನು ಮಾಡಲಿದ್ದು, ಈ ಬಗ್ಗೆ ಬಜೆಟ್ ನಲ್ಲಿಯೂ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ