ಬೆಂಗಳೂರು : ಇಂದು ಸಿಎಂ ನಿವಾಸ ಕೃಷ್ಣಾದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67ನೇ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಒಟ್ಟು 18,430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 15,032 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದರು.
ಇಂದಿನ ಸಭೆಯಲ್ಲಿ 11 ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ 6 ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಒಟ್ಟು 17 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
11 ಹೊಸ ಪ್ರಸ್ತಾವನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 14,906.9 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 13,050 ಉದ್ಯೋಗ ಸೃಷ್ಠಿಯಾಗಲಿದೆ. 6 ಹೆಚ್ಚುವರಿ ಬಂಡವಾಳ ಪ್ರಸ್ತಾವನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಒಟ್ಟು 3523.54 ಕೋಟಿಗಳ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 1,982 ಉದ್ಯೋಗ ಸೃಷ್ಟಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ
ಬೆಂಗಳೂರು: ಡಾಬಸ್ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ
