ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಕ್ರಮ

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿವಿಧ ವಿಷಯಗಳ ಕುರಿತು ಸಭೆ ನಡೆಸಿ, ಕೂಲಂಕಷವಾಗಿ ಚರ್ಚಿಸಿದರು.

ಈ ಸಭೆಯ ಮುಖ್ಯಾಂಶಗಳು:

• ಜೂನ್ ಒಂದರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುವುದು.

• ಒಂದು ಕೆಪಿಎಸ್ ಶಾಲೆಯಲ್ಲಿ 1200 ಮಕ್ಕಳಿಗೆ ಪ್ರವೇಶಾವಕಾಶ ಸಿಗಲಿದ್ದು, ಎಲ್‌ಕೆಜಿ ಇಂದ ಪಿಯುಸಿ ವರೆಗೆ ಒಂದೇ ಕಡೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ದೊರೆಯಲಿದೆ. ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ 800 ಶಾಲೆಗಳು ಸಂಪೂರ್ಣವಾಗಿ ಸಿದ್ಧವಾಗಬೇಕು.

• ಈ ವರ್ಷ 800 ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆರಂಭಿಸಲು ಸಂಬಂಧಪಟ್ಟವರು ಟೆಂಡರ್ ಪ್ರಕ್ರಿಯೆಗೆ ಆದಷ್ಟು ಬೇಗನೆ ಚಾಲನೆ ನೀಡಬೇಕು.

• ಕೆಪಿಎಸ್ ಶಾಲೆಗಳಿಗೆ ಶಾಲಾ ಬಸ್ ವ್ಯವಸ್ಥೆ ಸೌಲಭ್ಯವನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು.

• 15 ಸಾವಿರ ಶಿಕ್ಷಕರನ್ನು ಭರ್ತಿ ಮಾಡುವ ಕುರಿತು ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ತಕ್ಷಣ ಸಲ್ಲಿಸಬೇಕು.

ಪರೀಕ್ಷೆಗಳ ಫಲಿತಾಂಶ ಸುಧಾರಣೆಯ ಮಾಹಿತಿ:

• ಈ ಬಾರಿ ಎಸ್ಎಸ್ಎಲ್‌ಸಿ ಯಲ್ಲಿ ಶೇ. 94.10ರಷ್ಟು ಫಲಿತಾಂಶ ದಾಖಲಾಗಿದ್ದು, ಕಳೆದ ವರ್ಷಕ್ಕಿಂತ ಶೇ.14.06 ಹೆಚ್ಚಾಗಿದೆ. ಪಿಯುಸಿಯಲ್ಲಿ ಈ ಬಾರಿ ಶೇ.86.48ರಷ್ಟು ಹೆಚ್ಚಳವಾಗಿದ್ದು, ಕಳೆದ ವರ್ಷಕ್ಕಿಂತ ಶೇ. 13 ಹೆಚ್ಚಳವಾಗಿದೆ.

• ಎಸ್ಎಸ್ಎಲ್‌ಸಿ ಯಲ್ಲಿ ಈ ವರ್ಷ ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಗಳ ಸಂಖ್ಯೆ 2,393 ಇದ್ದು, ಕಳೆದ ವರ್ಷ 766 ಶಾಲೆಗಳು ಶೇ.100ರಷ್ಟು ಫಲಿತಾಂಶ ದಾಖಲಿಸಿದ್ದವು.

• ಈ ಬಾರಿ ಎಸ್ಎಸ್ಎಲ್‌ಸಿ ಯಲ್ಲಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳ ಫಲಿತಾಂಶ ಶೇ.18 ರಷ್ಟು ಹೆಚ್ಚಳವಾಗಿದೆ. ಇದೇ ರೀತಿ ಎಲ್ಲಾ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಫಲಿತಾಂಶ ಗಣನೀಯವಾಗಿ ಸುಧಾರಣೆಯಾಗಿದೆ. ಕೆಟಗರಿ-1 ಶೇ.16.6, 2 ಎ- ಶೇ. 11.5, 2 ಬಿ – ಶೇ.18, 3ಎ – ಶೇ. 8.12, 3ಬಿ – ಶೇ.10 ಫಲಿತಾಂಶ ಸುಧಾರಣೆಯಾಗಿದೆ.

• ಕಲ್ಯಾಣ ಕರ್ನಾಟಕದಲ್ಲಿ ಎಸ್ಎಸ್ಎಲ್‌ಸಿ ಫಲಿತಾಂಶ ಸುಧಾರಣೆಯಾಗಿದೆ. ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಶೇ.2ರಷ್ಟು ಹೆಚ್ಚಾಗಿದೆ. ಈ ಬಾರಿ ಯಾವುದೇ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಿಲ್ಲ. ಈ ಬಾರಿ ಎಸ್ಎಸ್ಎಲ್‌ಸಿ ಮೂರನೇ ಅಂತಿಮ ಪರೀಕ್ಷೆ ಇರುವುದಿಲ್ಲ.

• 2026ರಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣ ಪ್ರಮಾಣ ಶೇಕಡ 86.48 ಆಗಿದೆ. 2025ರಲ್ಲಿ ಶೇಕಡ 73.45 ಉತ್ತೀರ್ಣ ಪ್ರಮಾಣ ಇದ್ದು, ಶೇಕಡ 13.03 ಹೆಚ್ಚಳವಾಗಿದೆ

• ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಉತ್ತೀರ್ಣ ಪ್ರಮಾಣ ಗ್ರಾಮೀಣ ಪ್ರದೇಶದಲ್ಲಿ ಶೇಕಡ 94.80 ದಾಖಲಾಗಿದೆ. ನಗರ ಪ್ರದೇಶದಲ್ಲಿ ಶೇಕಡ 93.20 ದಾಖಲಾಗಿದೆ.

• ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಸಾಧನೆ ಪ್ರಸಕ್ತ ಸಾಲಿನಲ್ಲಿ ಶೇಕಡ 87.62, ನಗರ ಪ್ರದೇಶದ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣ ಶೇಕಡ 85.95 ದಾಖಲಾಗಿದೆ.

• ಶಾಲಾ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕಗಳೊಂದಿಗೆ ಉಚಿತ ನೋಟ್ ಬುಕ್ ವಿತರಿಸುವ ಬೇಡಿಕೆಯ ಬಗ್ಗೆ ಸಕಾಲದಲ್ಲಿ ಪರಿಶೀಲನೆ ನಡೆಸಲಾಗುವುದು. ಈ ಎಲ್ಲಾ ಅಂಶಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ