
ನ್ಯಾ.ಡಿ.ಕುನ್ಹಾ ವರದಿ ಸಲ್ಲಿಕೆ : ಜುಲೈ 17ರ ಸಚಿವ ಸಂಪುಟದಲ್ಲಿ ವರದಿ ಬಗ್ಗೆ ಚರ್ಚಿಸಿ ತೀರ್ಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜುಲೈ 11: ಜುಲೈ 17ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ನ್ಯಾಯಮೂರ್ತಿ ಕುನ್ಹಾ ಅವರ ವರದಿಯನ್ನು ಮಂಡಿಸಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

