ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರೆದ ವಾಹನದಲ್ಲಿ ಮೈಸೂರು ನಗರ ಸಂಚರಿಸಿ ದಸರಾ ದೀಪಾಲಂಕಾರವನ್ನು ವೀಕ್ಷಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.

ಸಂಗೀತ ಕ್ಷೇತ್ರದಲ್ಲಿ ಖ್ಯಾತ ಶಹನಾಯಿ ವಾದಕ ಪಂ.ಬಸವರಾಜ ಭಜಂತ್ರಿ ಅವರು ಮಾಡಿರುವ ಅಪಾರ ಸಾಧನೆ ಸ್ತುತ್ಯಾರ್ಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಚಿತ್ರರಂಗದ ಬೆಳವಣಿಗೆ ಸರ್ಕಾರ ಎಲ್ಲರೀತಿಯ ಬೆಂಬಲವನ್ನು ನೀಡುತ್ತಾ ಬಂದಿದೆ. ಕನ್ನಡ ಚಲನಚಿತ್ರಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು, ಚಿತ್ರರಂಗ ಬೆಳೆಯಬೇಕು. ಜನರು ಸಿನಿಮಾಗಳನ್ನು ಚಿತ್ರಮಂದಿರಗಳಿಗೆ ಹೋಗಿಯೇ ವೀಕ್ಷಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
2024ರ ಮೈಸೂರು ದಸರಾ ಉದ್ಘಾಟನೆಗೊಂಡಿದ್ದು, ಈ ವಿಶೇಷ ಸಂದರ್ಭಗಳ ಚಿತ್ರಗುಚ್ಛ ಇಲ್ಲಿದೆ

ಗ್ಯಾರಂಟಿ ಯೋಜನೆಗಳ ಮೂಲಕ ಸಂವಿಧಾನದ ಆಶಯದಂತೆ ದುರ್ಬಲ ವರ್ಗದವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ. ಪಂಚ ಗ್ಯಾರಂಟಿಗಳಿಂದ ಪ್ರತಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ 40ರಿಂದ 50 ಸಾವಿರ ರೂಪಾಯಿ ಆರ್ಥಿಕ ನೆರವು ದೊರೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.