
ಸುದ್ದಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ; ರಾಜ್ಯದ 5 ನಗರಗಳಲ್ಲಿ ಸೇಫ್ ಸಿಟಿ ಯೋಜನೆ ಜಾರಿಗೆ ಒತ್ತಾಯ
ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟದಲ್ಲಿರುವ/ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್ ಷಾ ಅವರನ್ನು ಕೋರಲಾಯಿತು.