
ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ?- ಮುಖ್ಯಮಂತ್ರಿ ಸಿದ್ದರಾಮಯ್ಯ
ಬಸವರಾಜ ಬೊಮ್ಮಾಯಿ ಅವರು 2023 ರ ಫೆಬ್ರುವರಿಯಲ್ಲಿ 3.09 ಲಕ್ಷ ಕೋಟಿ ರೂ. ಗಾತ್ರದ ಆಯವ್ಯಯ ಮಂಡಿಸಿದರು. 2024-25ನೇ ಸಾಲಿಗೆ ನಾನು ಮಂಡಿಸಿದ ಆಯವ್ಯಯದ ಗಾತ್ರ 3,71,343 ಕೋಟಿ ರೂ. ನಷ್ಟಿದ್ದು, ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ಗಿಂತ 62,200 ಕೋಟಿ ರೂ. ನಷ್ಟು ಗಾತ್ರ ಹೆಚ್ಚಳವಾಗಿದೆ.



